ಪುತ್ತೂರು, : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾಳಿಗೆ ಪುತ್ತೂರಿನ 5ನೇ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
ಸುಬ್ರಹ್ಮಣ್ಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಹಿಂದು ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಜಿಲ್ಲಾಸತ್ರ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿದ್ದು, ಚೈತ್ರಾ ಸಹಿತ ಆಕೆಯ ತಂಡದ ಆರು ಮಂದಿ ಸದಸ್ಯರಿಗೆ ಜಾಮೀನು ಮಂಜೂರುಗೊಳಿಸಿದೆ.
ಸುಳ್ಯ ನ್ಯಾಯಾಲಯ ಚೈತ್ರ ಕುಂದಾಪುರ ಹಾಗೂ ಅವರ ತಂಡದವರಿಗೆ ಅವರಿಗೆ ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ..3ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ ಚೈತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಕಾರಣಕ್ಕೆ ಹಾಜರುಪಡಿಸಿರಲಿಲ್ಲ ಚೈತ್ರಾ ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಪ್ರಶ್ನಿಸಿದ ನ್ಯಾಯಾಧೀಶರು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮತ್ತು ಜೈಲು ಅಧೀಕ್ಷಕರು ಹಾಗೂ ಚಿಕಿತ್ಸೆ ನೀಡಿದ ವೈದ್ಯಾಧಿಕಾರಿ ವಿವರ ನೀಡುವಂತೆ ಆದೇಶ ನೀಡಿದ್ದರು. ನ್ಯಾಯಾಲಯದ ವಿಚಾರಣೆಗೆ ಹಾಜರಾದ ಚೈತ್ರಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ಸುಳ್ಯ ನ್ಯಾಯಾಲಯ ವಿಧಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರಿಂದ, ಇದೀಗ ಪುತ್ತೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಚೈತ್ರಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…