Categories: ಉಡುಪಿ

ಕುಕ್ಕೆ ಸುಬ್ರಹ್ಮಣ್ಯ ಪ್ರಕರಣ ; ಚೈತ್ರ ಕುಂದಾಪುರಗೆ ಶರತ್ತು ಬದ್ಧ ಜಾಮೀನು ಮಂಜೂರು

ಪುತ್ತೂರು, : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾಳಿಗೆ ಪುತ್ತೂರಿನ 5ನೇ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

ಸುಬ್ರಹ್ಮಣ್ಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಹಿಂದು ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಜಿಲ್ಲಾಸತ್ರ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿದ್ದು, ಚೈತ್ರಾ ಸಹಿತ ಆಕೆಯ ತಂಡದ ಆರು ಮಂದಿ ಸದಸ್ಯರಿಗೆ ಜಾಮೀನು ಮಂಜೂರುಗೊಳಿಸಿದೆ.

ಸುಳ್ಯ ನ್ಯಾಯಾಲಯ ಚೈತ್ರ ಕುಂದಾಪುರ ಹಾಗೂ ಅವರ ತಂಡದವರಿಗೆ ಅವರಿಗೆ ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ..3ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ ಚೈತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಕಾರಣಕ್ಕೆ ಹಾಜರುಪಡಿಸಿರಲಿಲ್ಲ ಚೈತ್ರಾ ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಪ್ರಶ್ನಿಸಿದ ನ್ಯಾಯಾಧೀಶರು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮತ್ತು ಜೈಲು ಅಧೀಕ್ಷಕರು ಹಾಗೂ ಚಿಕಿತ್ಸೆ ನೀಡಿದ ವೈದ್ಯಾಧಿಕಾರಿ ವಿವರ ನೀಡುವಂತೆ ಆದೇಶ ನೀಡಿದ್ದರು.  ನ್ಯಾಯಾಲಯದ ವಿಚಾರಣೆಗೆ ಹಾಜರಾದ ಚೈತ್ರಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ಸುಳ್ಯ ನ್ಯಾಯಾಲಯ ವಿಧಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರಿಂದ, ಇದೀಗ ಪುತ್ತೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಚೈತ್ರಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago