ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕಾರ ಮಾಡಿದರು.
ಸುಬ್ರಹ್ಮಣ್ಯದಲ್ಲಿ ದೇವಳದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿ, ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ವೇಳೆ ಬಯಲು ಆಲಯ ಗಣಪ ಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕಕ್ಕೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿದರು. ಬಯಲು ಆಲಯ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಸಮಿತಿಯಿಂದ ಕ್ರಿಕೆಟಿಗ ಕೆ ಎಲ್ ರಾಹುಲ್ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಅರ್ಚಕರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿದ ರಾಹುಲ್ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು .
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…