ಕಾಪು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು.
ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ಕೊರಂಗ್ರಪಾಡಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನಾನು ಇಲ್ಲಿನ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುವುದಿತ್ತು, ಜೊತೆಗೆ ಇಲ್ಲಿನ ಕಾಪು ಮಾರಿಯಮ್ಮ ದೇವಸ್ಥಾನದ ಬಗ್ಗೆ ಕೇಳಿದ್ದೆ, ದೇಗುಲ ಬಹಳ ಸುಂದರವಾಗಿ ಮೂಡಿ ಬಂದಿದೆ, ಕರಾವಳಿ ಭಾಗಕ್ಕೆ ಭೇಟಿ ನೀಡುವ ಯಾತ್ರಿಗಳು, ಪ್ರವಾಸಿಗರು ಇಲ್ಲಿಗೆ ಒಮ್ಮೆಯಾದರೂ ಭೇಟಿ ನೀಡಿ ಎಂದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…