Featured

ಕುತಂತ್ರದಿಂದ ಅಧಿಕಾರದ ಗದ್ದುಗೆಯೇರಿದ ಬಿಜೆಪಿ, ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿದೆ : ಸುನಿಲ್ ಕುಮಾರ್ ಬಜಾಲ್ -Vishwanews24

ಮಂಗಳೂರು: ಕಟ್ಟಡ ಕಾರ್ಮಿಕರ ಪರವಾಗಿ ಧೃಢವಾಗಿ ನಿಂತ ದಕ್ಷ ಅಧಿಕಾರಿಣಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆ ಮಾಡಿದ ರಾಜ್ಯ ಸರಕಾರದ ಕುತಂತ್ರವನ್ನು ಖಂಡಿಸಿ ಸಿಐಟಿಯು ನೇತ್ರತ್ವದಲ್ಲಿ ನಗರದಲ್ಲಿಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ , ” ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ಕುತಂತ್ರದಿಂದ ಅಧಿಕಾರದ ಗದ್ದುಗೆಯೇರಿದ ಬಿಜೆಪಿ, ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭಾರೀ ಪ್ರವಾಹದಿಂದ ಲಕ್ಷಾಂತರ ಜನತೆ ಮನೆಮಠಗಳನ್ನು ಕಳೆದುಕೊಂಡರೂ, ಕೋಟ್ಯಾಂತರ ರೂಪಾಯಿಯ ಆಸ್ತಿಪಾಸ್ತಿ ಹಾನಿಗೊಂಡರೂ ರಾಜ್ಯ ಸರಕಾರ ಕಿಂಚಿತ್ತೂ ಸ್ಪಂದಿಸಿಲ್ಲ.
ರಾಜ್ಯದಿಂದ 25 ಮಂದಿ ಸಂಸದರು ಬಿಜೆಪಿಯಿಂದದ ಆಯ್ಕೆಯಾಗಿ ಹೋಗಿದ್ದರೂ ಕೇಂದ್ರ ಸರಕಾರವೂ ಕೂಡ ಎಳ್ಳಷ್ಟೂ ಸ್ಪಂದಿಸಿಲ್ಲ. ಈತನ್ಮಧ್ಯೆ ರಾಜ್ಯ ಸರ್ಕಾರವು 37 ಇಲಾಖೆಗಳಿಗೆ ನೋಟೀಸ್ ಜಾರಿ ಮಾಡಿ ಅಲ್ಲಿದ್ದ ಹಣವನ್ನು ನೆರೆ ಪರಿಹಾರಕ್ಕೆ ನೀಡಬೇಕೆಂದು ಒತ್ರಾಯಿಸುತ್ತಿರುವುದು ರಾಜ್ಯ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರಿಸಿದ ಸುಮಾರು 9,000 ಕೋಟಿ ರೂಪಾಯಿ ಹಣದ ಮೇಲೆ ಪ್ರತಿಯೊಬ್ಬರ ಕಣ್ಣು ಬಿದ್ದಿದ್ದು,ಅದನ್ನು ನುಂಗಿ ನೀರು ಕುಡಿಯಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ.
ಕಟ್ಟಡ ಕಾರ್ಮಿಕರ ಮೀಸಲು ನಿಧಿಯನ್ನು ಇತರೆ ಕಾರಣಕ್ಕೆ ಬಳಸಬಾರದೆಂಬ ಸುಪ್ರೀಂ ಕೋರ್ಟ್ ನ ಆದೇಶವನ್ನು ಉಲ್ಲಂಘಿಸಿರುವುದು ಮಾತ್ರವಲ್ಲ,ಅದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆಗೊಳಿಸಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದರು.

ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ” ಕಟ್ಟಡ ಕಾರ್ಮಿಕರ ನೊಂದಾವಣೆ ಶುಲ್ಕ ಹಾಗೂ ಸೆಸ್ ಮೂಲಕ ಸಂಗ್ರಹ ವಾಗುತ್ತಿರುವ ಕೋಟ್ಯಾಂತರ ರೂಪಾಯಿ ಹಣವಿರುವ ಇಲಾಖೆಗೆ ಇಷ್ಟವರೆಗೆ ಪ್ರಮುಖ ಅಧಿಕಾರಿಯೊಬ್ಬರನ್ನು ನೇಮಕ ಮಾಡದಿರುವ ಸರಕಾರದ ಕ್ರಮವೇ ಸಂಶಯಾಸ್ಪದವಾಗಿದೆ. ಕಳೆದ 5 ತಿಂಗಳ ಹಿಂದೆ ಕಾರ್ಯದರ್ಶಿ ಯಾಗಿ ನೇಮಕಗೊಂಡ ಶ್ರೀಮತಿ ರೋಹಿಣಿ ಸಿಂಧೂರಿಯವರು ಕಟ್ಟಡ ಕಾರ್ಮಿಕರ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿರುತ್ತಾರೆ.ಕಟ್ಟಡ ಕಾರ್ಮಿಕರಿಗಾಗಿ ಮೀಸಲಿರಿಸಿದ ಹಣವನ್ನು ತನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯ ಕೆಲಸಗಳಿಗೆ ಉಪಯೋಗಿಸಲು ಬಿಡಲಾರೆ ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ ವಾಗಿದೆ” ಎಂದು ಹೇಳಿದರು

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ,ಜಯಂತಿ ಶೆಟ್ಟಿ,ದಿನೇಶ್ ಶೆಟ್ಟಿ,ಇತರ ಸಂಘಟನೆಗಳ ನಾಯಕರಾದ ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಭಾರತಿ ಬೋಳಾರ,ತಿಮ್ಮಯ್ಯ ಕೊಂಚಾಡಿ,ಕ್ರಷ್ಣಪ್ಪ ಕೊಂಚಾಡಿ ಮುಂತಾದವರು ಹಾಜರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago