ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನಿದೆ. ಆದರೆ ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕುದ್ರೋಳಿ ಕಸಾಯಿಖಾನೆ ಮುಚ್ಚಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿ ನಿರಂತರ ಗೋಹತ್ಯೆ ನಡೆಯುತ್ತಿದೆ. ಪ್ರತಿ ತಿಂಗಳು 350-400 ಜಾನುವಾರುಗಳ ಹತ್ಯೆ ನಡೆಯುತ್ತಿದ್ದು, ಈ ದಾಖಲೆಗಳು ಮಾಹಿತಿ ಹಕ್ಕಿನಿಂದ ಪಡೆದ ಮಾಹಿತಿಯಿಂದಲೇ ಬಹಿರಂಗವಾಗಿದೆ ಎಂದು ಅವರು ತಿಳಿಸಿದರು.
ಈ ಕುರಿತು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಏನು ಪ್ರಯೋಜನವಾಗಿಲ್ಲ. ಪೊಲೀಸರು ಈವರೆಗೂ ಪ್ರಕರಣ ಕೂಡ ದಾಖಲಿಸಿಕೊಂಡಿಲ್ಲ. ಪ್ರಕರಣ ದಾಖಲಿಸದಂತೆ ಪೊಲೀಸರಿಗೆ ಮೇಲಿನಿಂದ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.
ಮಾಹಿತಿಯಂತೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕಳೆದ 6 ತಿಂಗಳಲ್ಲಿ 1,800 ಜಾನುವಾರುಗಳ ಹತ್ಯೆ ನಡೆದಿದೆ. ಜಿಲ್ಲೆಯಲ್ಲಿ ಅನಧಿಕೃತ ಬೀಫ್ ಸ್ಟಾಲ್ ಗಳು ಕಾರ್ಯಾಚರಿಸುತ್ತಿವೆ. ತಕ್ಷಣ ಸರಕಾರ ಇದರ ವಿರುದ್ಧ ಕ್ರಮಕೈಗೊಳ್ಳಬೇಕು. ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆಯನ್ನು ರದ್ದುಗೊಳಿಸಬೇಕು ಎಂದು ಶರಣ್ ಪಂಪ್‌ವೆಲ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಿವಾನಂದ ಮೆಂಡನ್, ಪ್ರದೀಪ್ ಪಂಪ್‌ವೆಲ್, ಪ್ರವೀಣ್ ಕುತ್ತಾರ್ ಹಾಗೂ ಭುಜಂಗ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…