ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಗುರುವಾರ ಸಂಭ್ರಮದ ಚಾಲನೆ ದೊರಕಿದೆ.
ಬೆಳಗ್ಗೆ 9ಕ್ಕೆ ಗುರುಪ್ರಾರ್ಥನೆ ಯೊಂದಿಗೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಗಣ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.
ಅ. 7ರಿಂದ 16ರವರೆಗೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ- ನಮ್ಮ ಸುರಕ್ಷೆ’ಘೋಷ ವಾಕ್ಯದಡಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗ ನಡೆಯಲಿದೆ.
ದಸರಾ ಹಿನ್ನೆಲೆಯಲ್ಲಿ ನಗರಾದ್ಯಂತ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ಕುದ್ರೋಳಿ-ಮಣ್ಣಗುಡ್ಡೆ -ಲೇಡಿಹಿಲ್ ವೃತ್ತ-ಲಾಲ್‌ಬಾಗ್
ಜಂಕ್ಷನ್- ಪಿವಿಎಸ್-ನವಭಾರತ್ ವೃತ್ತ- ಹಂಪನಕಟ್ಟೆ- ಮೋಹಿನಿ ವಿಲಾಸ-ರಥಬೀದಿ-ನ್ಯೂಚಿತ್ರ ಚಿತ್ರಮಂದಿರ-ಕುದ್ರೋಳಿ ದೇವಸ್ಥಾನ ಸಹಿತ ಸುಮಾರು 6 ಕಿ.ಮೀ. ನಷ್ಟು ಉದ್ದದ ರಸ್ತೆಗೆ 11 ದಿನಗಳ ಅವಧಿಗೆ ಮನಪಾದಿಂದ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಅದೇ ರೀತಿ, ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಹಿನ್ನೆಯಲ್ಲಿಯೂ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಕೆಲವೊಂದು ಖಾಸಗಿ, ಸರಕಾರಿ ಕಟ್ಟಡಗಳಲ್ಲಿಯೂ ದೀಪಾಲಂಕಾರ ಅಳವಡಿಸಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…