Featured

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಸಂಭ್ರಮದ ಚಾಲನೆ -Vishwanews24

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಸಂಭ್ರಮದ ಚಾಲನೆ -Vishwanews24

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಗುರುವಾರ ಸಂಭ್ರಮದ ಚಾಲನೆ ದೊರಕಿದೆ.

ಬೆಳಗ್ಗೆ 9ಕ್ಕೆ ಗುರುಪ್ರಾರ್ಥನೆ ಯೊಂದಿಗೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಗಣ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.

ಅ. 7ರಿಂದ 16ರವರೆಗೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ- ನಮ್ಮ ಸುರಕ್ಷೆ’ಘೋಷ ವಾಕ್ಯದಡಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗ ನಡೆಯಲಿದೆ.

ದಸರಾ ಹಿನ್ನೆಲೆಯಲ್ಲಿ ನಗರಾದ್ಯಂತ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ.ಕುದ್ರೋಳಿ-ಮಣ್ಣಗುಡ್ಡೆ -ಲೇಡಿಹಿಲ್‌ ವೃತ್ತ-ಲಾಲ್‌ಬಾಗ್‌
ಜಂಕ್ಷನ್‌- ಪಿವಿಎಸ್‌-ನವಭಾರತ್‌ ವೃತ್ತ- ಹಂಪನಕಟ್ಟೆ- ಮೋಹಿನಿ ವಿಲಾಸ-ರಥಬೀದಿ-ನ್ಯೂಚಿತ್ರ ಚಿತ್ರಮಂದಿರ-ಕುದ್ರೋಳಿ ದೇವಸ್ಥಾನ ಸಹಿತ ಸುಮಾರು 6 ಕಿ.ಮೀ. ನಷ್ಟು ಉದ್ದದ ರಸ್ತೆಗೆ 11 ದಿನಗಳ ಅವಧಿಗೆ ಮನಪಾದಿಂದ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಅದೇ ರೀತಿ, ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಹಿನ್ನೆಯಲ್ಲಿಯೂ ಸುತ್ತಮುತ್ತ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ಕೆಲವೊಂದು ಖಾಸಗಿ, ಸರಕಾರಿ ಕಟ್ಟಡಗಳಲ್ಲಿಯೂ ದೀಪಾಲಂಕಾರ ಅಳವಡಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago