ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ನಿನ್ನೆಯ ತಡರಾತ್ರಿ ಗುಡುಗು ಸಹಿತ ಸುರಿದಂತ ಮಳೆಯ ಸಂದರ್ಭದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಸಂಪೂರ್ಣವಾಗಿ ಹಾನಿಗೊಂಡಿದೆ.
ಆದ್ರೇ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಾಗರಾಜ ಮಡಿವಾಳ ಎಂಬುವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಮನೆಯ ಹಂಚುಗಳು ಸಂಪೂರ್ಣ ಹಾನಿಗೊಂಡಿವೆ. ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಸೇರಿದಂತೆ ಅನೇಕ ವಸ್ತುಗಳು ಸಂಪೂರ್ಣವಾಗಿ ಸಿಡಿಲು ಬಡಿತದಿಂದ ಹಾನಿಗೊಂಡಿವೆ.
ಜೋರು ಮಳೆಯ ಜೊತೆಗೆ ಸಿಡಿಲು ಬಡಿಯುವಂತ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಬೇರೊಂದು ಕಡೆಯಲ್ಲಿ ಇದ್ದಿದ್ದರಿಂದಾಗಿ ಮನೆಗೆ ಸಿಡಿಲು ಬಡಿದು ನಾಶಗೊಂಡರೂ, ಯಾವುದೇ ಪ್ರಾಣಾಪಾಯ ಉಂಟಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…