ಬಿಜೆಪಿ ಅಧಿಕಾರಕ್ಕೇರಿರುವುದು ಕುಮಾರಸ್ವಾಮಿಯವರಿಗೆ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ : ಶ್ರೀರಾಮುಲು -Vishwanews24
ಬೆಂಗಳೂರು; “ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಬಿಜೆಪಿ ಅಧಿಕಾರಕ್ಕೇರಿರುವುದು ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಇದೇ ಕಾರಣಕ್ಕೆ ಆ ಮನುಷ್ಯ ಅಧಿಕಾರ ಕಳೆದುಕೊಂಡಾಗಿನಿಂದ ಹೀಗೆ ಮಾತಾಡ್ತಾ ಇದಾರೆ. ” ಎಂದು ಹೇಳುವ ಮೂಲಕ ಕುಮಾರಸ್ವಾಮಿ ವಿರುದ್ಧ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ “ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾವೊಬ್ಬ ಸಚಿವರೂ ಪ್ರಮಾಣಿಕವಾಗಿಲ್ಲ” ಎಂದು ಹೇಳುವ ಮೂಲಕ ಬಿಜೆಪಿ ನಾಯಕರನ್ನು ಕೆಣಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, “ಎರಡು ಬಾರಿ ಸಿಎಂ ಆದರೂ ಕುಮಾರಸ್ವಾಮಿಯವರಿಗೆ ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳೋಕೆ ಆಗ್ತಿಲ್ಲ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ಮೊದಲು ಒಂದು ರೀತಿ ಮಾತನಾಡುತ್ತಾರೆ, ಸಿಎಂ ಆದ ಬಳಿಕ ಒಂದು ರೀತಿ ಮಾತನಾಡುತ್ತಾರೆ. ಇದಕ್ಕಾಗಿಯೇ ಅವರ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷದಿಂದ ಹೊರ ನಡೆದಿದ್ದಾರೆ. ಅಧಿಕಾರ ಕಳೆದುಕೊಂಡು ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಕಿಡಿಕಾರಿದರು…. ಬಿಜೆಪಿ ಅಧಿಕಾರಕ್ಕೇರಿರುವುದು ಅವರಿಂದ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಕಾಮಾಲೆ ಕಣ್ಣಿಗೆ ಜಗತ್ತೆಲ್ಲವೂ ಹಳದಿ” ಎಂದು ಹೇಳುವ ಮೂಲಕ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ..
