ಮಂಡ್ಯ: ರಾಜ್ಯದಲ್ಲಿ ಡ್ರಗ್ ಕೇಸ್ ಯಾವ ರೀತಿ ಹಳ್ಳ ಹಿಡಿದಿದೆ ಎಂದು ನಾವೆಲ್ಲ ನೋಡಿದ್ದೇವೆ. ಅದೇ ರೀತಿ ಸಿಡಿ ಕೇಸ್ ಸಹ ಹಳ್ಳ ಹಿಡಿಯುತ್ತದೆ ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಗುಡುಗಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮೇಗೌಡ, ಡ್ರಗ್ ಕೇಸ್‍ನಲ್ಲಿ ಬಿಲ ಅಗೆದು ಹಿಡಿಯುವ ಹಾಗೆ ಬೇಕಾದವರನ್ನು ಬಿಟ್ಟು ಬೇಡವಾದವರನ್ನು ಹಿಡಿದರು. ಅದೇ ರೀತಿಯಲ್ಲಿ ಈ ಸಿಡಿ ಕೇಸ್ ಕೂಡ ಹಳ್ಳ ಹಿಡಿಯುತ್ತದೆ. ಪೊಲೀಸರು ಸರ್ಕಾರದ ಅನ್ನ ತಿನ್ನುತ್ತಿದ್ದೇವೆ ಎಂದು ಅಂದುಕೊಂಡಿದ್ದರೆ ಇಷ್ಟೊತ್ತಿಗೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು. ಆದರೆ ಇಲ್ಲಿಯವರಗೆ ಬಂಧಿಸುವ ಕೆಲಸ ಮಾತ್ರ ಆಗಿಲ್ಲ. ಮುಖ್ಯಮಂತ್ರಿಗಳು ಅತ್ಯಾಚಾರ ಆರೋಪಿಯನ್ನು ಉಪಚುನಾವಣೆಯ ಪ್ರಚಾರಕ್ಕೆ ಆಹ್ವಾನ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಈ ಕೇಸ್‍ಗೆ ನ್ಯಾಯವಾದರೂ ಹೇಗೆ ಸಿಗುತ್ತದೆ ಎಂದು ಸಿಎಂ ವಿರುದ್ಧ ಕಿಡಿಕಾರಿದರು.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ಒಂದು ವೇಳೆ ಎಸ್‍ಐಟಿ ಅಧಿಕಾರಿಗಳು ಈ ಕೇಸ್‍ನ್ನು ಹಳ್ಳ ಹಿಡಿಸಿದರೆ, ನಾವು ಕೋರ್ಟ್‍ನಲ್ಲಿ ಈ ಬಗ್ಗೆ ದೂರು ದಾಖಲು ಮಾಡಿ ಸಿಬಿಐ ತನಿಖೆ ಆಗುವಂತೆ ಹೋರಾಟ ಮಾಡುತ್ತೇವೆ. ಮುಂದೆ ಕುಮಾರಸ್ವಾಮಿ ಅವರ ಸರ್ಕಾರ ಬಂದಾಗ ಈ ಕೇಸ್‍ನ್ನು ಸಿಬಿಐನಿಂದ ತನಿಖೆ ಮಾಡಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಅತ್ಯಾಚಾರಿ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ತಲೆ ತಗ್ಗಿಸಿ ಇರಬೇಕಾಗಿತ್ತು. ಆದರೆ ಅವರು ಸರ್ಕಾರವನ್ನು ಬೀಳಿಸುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಹೀಗೆ ಇರುವಾಗ ಈ ಕೇಸ್‍ನಲ್ಲಿ ಜಾರಕಿಹೊಳಿಗೆ ಕ್ಲೀನ್ ಚೀಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಯಾಪಟ್ಟರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…