ಮೈಸೂರು: “ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ” ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರಶಂಸಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾದಂತಹ ರೈತರಪರವಾದ ಕಾರ್ಯಕ್ರಮವನ್ನು ನೀಡಿದ್ದಾರೆ. ಸರ್ಕಾರದಲ್ಲಿ ಅವರು ಉತ್ತಮ ಕೆಲಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿಬಂಧಕ ಹಾಗೂ ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಎಸ್ ಬೆಂಬಲದ ಬಗ್ಗೆ ಹಾಗೂ ಜೆಡಿಎಸ್ ನಿಲುವಿನ ವಿರುದ್ಧ ಹೆಚ್ಡಿಕೆ ವಿರುದ್ದ ವಾಗ್ದಾಳಿ ನಡೆಸಿದ್ದರು.
ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಹೆಚ್ಡಿಕೆ ಪರ ಬ್ಯಾಟಿಂಗ್ ಮಾಡಿದ್ದು, “ಹೆಚ್ಡಿಕೆ ಅವರಿಗೆ ರೈತರ ಹಾಗೂ ಗೋವಿನ ಬಗ್ಗೆ ತಿಳಿದಿದೆ. ಹಾಗಾಗಿ ಅವರು ಕಾಯ್ದೆಗೆ ಬೆಂಬಲ ನೀಡಿದ್ದಾರೆ. ಅವರು ಬಿಜೆಪಿ ಸರ್ಕಾರ ಮಾಡಿದ ಉತ್ತಮ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ. ರಾಜಕೀಯ ವಿಚಾರವಾಗಿ ಅವರನ್ನು ಟೀಕಿಸುವುದು ಸಣ್ಣತನ” ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…