Featured

ಕುಮಾರಸ್ವಾಮಿ ಕುರ್ಚಿ ಉಳಿಸಲು ಒಕ್ಕಲಿಗ ಸ್ವಾಮೀಜಿಗಳ ಪ್ರವೇಶ ; ಸಿಎಂ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ನಂಜಾವಧೂತ ಸ್ವಾಮೀಜಿ

ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.

5 ವರ್ಷ ಕುಮಾರಸ್ವಾಮಿ ಸಿಎಂ ಆಗಿರಬೇಕು ಎಂಬುದು ನಮ್ಮೆಲ್ಲರ ಆಸೆ, ಆ ಆಸೆಯನ್ನು ಈಡೇರಿಸುವ ಜವಬ್ದಾರಿಯನ್ನು ಡಿಕೆಶಿ ಹೆರಬೇಕು ಎಂದು ಹೇಳಿದರು.

ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

6 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

6 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

7 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

7 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

7 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

7 hours ago