ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ : ಸಿದ್ದರಾಮಯ್ಯ ವಿರುದ್ಧ ದೇವೇಗೌಡ ಆರೋಪ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮೊದಲಿಂದಲೂ ತಿಕ್ಕಾಟವಿತ್ತು. ಇದೇ ಕಾರಣದಿಂದಾಗಿ ಸಿದ್ದರಾಮಯ್ಯ ಸರಕಾರ ಪತನಕ್ಕೆ ತಂತ್ರ ನಡೆಸಿ ಯಶವಿಯಾಗಿದ್ದಾರೆ. ಇನ್ನು ಮೈತ್ರಿ ಸರ್ಕಾರ ರಚನೆಗೊಳಿಸಿ ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯಾಗುವಂತೆ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಸೂಚಿಸಿದ್ದರು. ಆದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದು ಹೆಚ್ ಡಿ ದೇವೇಗೌಡ ಆರೋಪಿಸಿದ್ದಾರೆ.

ಜಾಹಿರಾತು

ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದಕ್ಕೆ ತಮ್ಮ ಒಪ್ಪಿಗೆ ಇಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಆಪ್ತರೇ ಹೇಳಿದ್ದರು. ಕಾಂಗ್ರೆಸ್ ಜೊತೆ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ಕುಮಾರಸ್ವಾಮಿಗೆ ದಿನನಿತ್ಯ ಕಿರುಕುಳ ನೀದಲಾಗುತ್ತಿತ್ತು. ನಿರಂತರ ಒತ್ತಡದ ನಡುವೆ ಅವರು ಸರಕಾರ ನಡೆಸುತ್ತಿದ್ದರು. ಇದೀಗ ಅವರು ಒತ್ತಡದಿಂದ ನಿರಾಳರಾಗಿದ್ದಾರೆ ಎಂದರು.