ಬೆಳಗಾವಿ: ಗ್ಯಾರಂಟಿ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ ಡಿಸಿಎಂ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ. ಮಿಸ್ಟರ್ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ಎಂದರು.
ನಾನು ಕಲ್ಲು ಲೂಟಿ ಮಾಡಿದೆನೋ, ಮೋಸ ಮಾಡಿದೆನೋ ಎಂಬ ಬಗ್ಗೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.
ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಇದನ್ನು ನಾವು ಖಂಡಿಸಬೇಕು. ನಾನು ಎಲ್ಲ ಮಹಿಳಾ ಸಂಘಟನೆಗಳಿಗೆ ಕರೆ ಕೊಡ್ತೇನೆ, ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿ. ಪ್ರತಿಯೊಂದು ತಾಲೂಕಿನಲ್ಲಿ ಹೋರಾಟ ಮಾಡಬೇಕು. ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ಕರೆ ಕೊಡ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಕುಮಾರಸ್ವಾಮಿಗೆ ಪಿಕ್ ಪಾಕೆಟ್ ಮಾಡಿ ರೂಢಿ ಇದೆ. ಅದಕ್ಕೆ ಗ್ಯಾರಂಟಿಗಳನ್ನು ಪಿಕ್ ಪಾಕೆಟ್ ಎಂದು ಹೇಳಿದ್ದಾರೆ. ಕುಮಾರಸ್ವಾಮಿಯ ವಿಷಾದ ನಮಗೆ ಬೇಡ. ಕೊಲೆ ಮಾಡಿ ನಂತರ ವಿಷಾದ ಎಂದು ಹೇಳಿದರೆ ಹೇಗೆ? ಹಿಟ್ ಆ್ಯಂಡ್ ರನ್ಗೆ ಕುಮಾರಸ್ವಾಮಿ ಬಹಳ ಫೇಮಸ್ ಎಂದು ಡಿಕೆ ಶಿವಕುಮಾರ್ ಟೀಕಿಸಿದರು. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಎಂದು ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…