Featured

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ – vishwanews24

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ

ಬೆಂಗಳೂರು : ಕಾನೂನು ರೀತಿಯಲ್ಲಿ ‘ಕುಮ್ಕಿ ಭೂಮಿ’ ಮಂಜೂರು ಮಾಡಲು ಸಾಧ್ಯವಿಲ್ಲ. ಆದರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯನ್ನೂ ಮಾಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದರು.

ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು.

ಅಲ್ಲದೆ, ಕೆಎಲ್‍ಆರ್ ಆಕ್ಟ್ ರೂಲ್ಸ್- 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು.

ಇದಕ್ಕೂ ಮುನ್ನ ಸುನೀಲ್ ಕುಮಾರ್ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

11 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

13 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago