Featured

‘ಕುಲಭೂಷಣ್ ಜಾಧವ್‌ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ : ಭಾರತ ಆಕ್ರೋಶ -Vishwanews24

ನವದೆಹಲಿ: ‘ಕುಲಭೂಷಣ್ ಜಾಧವ್‌ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ. ಜಾಧವ್‌ ರಿಂದ ಪಾಕಿಸ್ತಾನ ಗಿಳಿಪಾಠ ಹೇಳಿಸಿದ್ದು, ಇದರಿಂದಾಗಿ ಅವರು ಬಹಳ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು  ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್​ ಜಾಧವ್‌ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು.

ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್‌ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago