ನವದೆಹಲಿ:
ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು.
ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…