ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸುಳ್ಳು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಹಾಗೂ ಈ ಮೂಲಕ ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.
ಈ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಣೆಯನ್ನೇ ಮಾಡಿಲ್ಲ. 2017 – 2018 ರ ಸಾಲಿನಲ್ಲಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಈ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡಿತ್ತು. 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕದ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು)’ ಶೀರ್ಷಿಕೆಯ ಅಡಿಯಲ್ಲಿ ಇದ್ದ 9 ಸಾಲುಗಳ ವಿಷಯಾಂಶವನ್ನು 2022 – 23ನೇ ಸಾಲಿನ ಪರಿಸರ ಅಧ್ಯಯನ ಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಮಾಧ್ಯಮ ಪ್ರಕಟಣೆಯನ್ನು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು..! ಎಂದು ಸಚಿವ ಬಿ. ಸಿ. ನಾಗೇಶ್ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರು ಮೊದಲು ಪಠ್ಯ ಪುಸ್ತಕವನ್ನು ಓದಬೇಕು, ನಂತರ ಮಾತನಾಡಬೇಕು ಎಂದು ಆಗ್ರಹಿಸಿರುವ ಸಚಿವ ಬಿ. ಸಿ. ನಾಗೇಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹಿಂದೆ ಇರುವವರೇ ಅವರ ದಾರಿ ತಪ್ಪಿಸಿದ್ದಾರೆ ಎಂದು ಕಾಲೆಳೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…