Featured

ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಹಾಗೂ  ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು : ಶಿಕ್ಷಣ ಇಲಾಖೆ ಸ್ಪಷ್ಟನೆ – Vishwanews24

ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಣೆಯನ್ನೇ ಮಾಡಿಲ್ಲ ..

ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ‌ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ

ಕಾಂಗ್ರೆಸ್ ನಾಯಕರು ಮೊದಲು ಪಠ್ಯ ಪುಸ್ತಕವನ್ನು ಓದಬೇಕು, ನಂತರ ಮಾತನಾಡಬೇಕು ಎಂದು ಆಗ್ರಹಿಸಿರುವ ಶಿಕ್ಷಣ ಸಚಿವ

ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸುಳ್ಳು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಹಾಗೂ ಈ ಮೂಲಕ ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಈ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಣೆಯನ್ನೇ ಮಾಡಿಲ್ಲ. 2017 – 2018 ರ ಸಾಲಿನಲ್ಲಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಈ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡಿತ್ತು. 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕದ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು)’ ಶೀರ್ಷಿಕೆಯ ಅಡಿಯಲ್ಲಿ ಇದ್ದ 9 ಸಾಲುಗಳ ವಿಷಯಾಂಶವನ್ನು 2022 – 23ನೇ ಸಾಲಿನ ಪರಿಸರ ಅಧ್ಯಯನ ಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಮಾಧ್ಯಮ ಪ್ರಕಟಣೆಯನ್ನು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು‌ ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ‌ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು..! ಎಂದು ಸಚಿವ ಬಿ. ಸಿ. ನಾಗೇಶ್ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನಾಯಕರು ಮೊದಲು ಪಠ್ಯ ಪುಸ್ತಕವನ್ನು ಓದಬೇಕು, ನಂತರ ಮಾತನಾಡಬೇಕು ಎಂದು ಆಗ್ರಹಿಸಿರುವ ಸಚಿವ ಬಿ. ಸಿ. ನಾಗೇಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹಿಂದೆ ಇರುವವರೇ ಅವರ ದಾರಿ ತಪ್ಪಿಸಿದ್ದಾರೆ ಎಂದು ಕಾಲೆಳೆದಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

3 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

5 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

5 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

6 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

6 hours ago