ಉಡುಪಿ,: ನಿಷೇಧಿತ ಔಷದ ಸಾಗಾಟ ಆರೋಪದಲ್ಲಿ ಕುವೈತ್ ನಲ್ಲಿ ಬಂಧಿಯಾಗಿದ್ದ ಕುಂದಾಪುರ ಬಸ್ರೂರು ನಿವಾಸಿ ಶಂಕರ್ ಪೂಜಾರಿ (40) ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕುವೈತ್ ಅಗ್ರಿಕಲ್ಚರ್ ಪ್ರಾಡಕ್ಟ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್ ಪೂಜಾರಿ ಕಳೆದ ವರ್ಷ ಮೇ ತಿಂಗಳಲ್ಲಿ 10 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದು, ವಾಪಸು ತೆರಳುವಾಗ ಪರಿಚಯಸ್ಥರು ನೀಡಿದ್ದ ಔಷಧ ಪಾರ್ಸೆಲ್ ನ್ನು ತೆಗೆದುಕೊಂಡು ಹೋಗಿದ್ದರು. ಅದು ಕುವೈತ್ ನಲ್ಲಿ ನಿಷೇಧಿತ ಔಷಧವಾಗಿದ್ದ ಕಾರಣ ವಿಮಾನ ನಿಲ್ದಾಣದಲ್ಲಿ ಇಳಿದ ಶಂಕರ ಪೂಜಾರಿಯವರನ್ನು ಪೊಲೀಸರು ಬಂಧಿಸಿದ್ದರು.
ಶಂಕರ ಪೂಜಾರಿ ಅವರ ಬಿಡುಗಡೆಗೆ ಸಂಬಂಧಿಸಿ ಉಡುಪಿ ಜಿಲ್ಲಾ ಆಡಳಿತ, ಕರವೇ, ಮಾನವ ಹಕ್ಕು ಪ್ರತಿಷ್ಟಾನ,ಕುವೈತ್ ತುಳುಕೂಟ, ಬಿಲ್ಲವ ಸಂಘ ಶ್ರಮಿಸಿದೆ. ಎಲ್ಲರ ಪ್ರಯತ್ನ ಸಹಕಾರದಿಂದ ಪತಿ ನ್ಯಾಯಾಲಯ ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕುವೈತ್ ಉದ್ಯಮಿ ಪುಷ್ಪರಾಜ್ ಎಂಬವರು ಕರೆ ಮಾಡಿ ವಿಚಾರ ತಿಳಿಸಿದ್ದಾರೆ ಎಂದು ಶಂಕರ್ ಪೂಜಾರಿ ಅವರ ಪತ್ನಿ ಜ್ಯೋತಿ ಬಸ್ರೂರು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…