Featured

ಕುಸ್ತಿಪಟು ಬಜರಂಗ ಪುನಿಯಾ 4 ವರ್ಷ ಅಮಾನತು – vishwanews24

ಕುಸ್ತಿಪಟು ಬಜರಂಗ ಪುನಿಯಾ 4 ವರ್ಷ ಅಮಾನತು

ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಬಜರಂಗ್ ಪುನಿಯಾ  ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು  ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್  ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು.

ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ. ಈ ಸಂದರ್ಭದಲ್ಲಿ ಬಜರಂಗ್ ಪುನಿಯಾ ಸ್ಪರ್ಧಾತ್ಮಕ ಕುಸ್ತಿಗೆ ಮರಳಲು ಮತ್ತು ವಿದೇಶದಲ್ಲಿ ಕೋಚಿಂಗ್‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ತನ್ನ ಆದೇಶದಲ್ಲಿ ತಿಳಿದಿದೆ.

 

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago