ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ – Vishwanews24
ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ
ತಿರುವನಂತಪುರಂ: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.
ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ.
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳವು – Vishwanews24
ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ
