ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಕೂಟರ್‌ನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೊದಲೇ ಶಿಥಿಲವಾಸ್ಥೆಯಲ್ಲಿ ಇರುವ ಈ ಸೇತುವೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಕಾರಣ ಕೆಲ ಕಾಲ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಮೃ*ತದೇಹವನ್ನು ಆಸ್ಪತ್ರೆಗೆ ರವಾನಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಕೂಟರ್ ಸವಾರರು ಯಾರು ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…