Featured

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

15 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

15 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

15 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago