ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.
ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.
ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…