ನವದೆಹಲಿ: ರೈತ ವಿರೋಧಿ ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನ ಮಂತ್ರಿಯವರ ಘೋಷಣೆಯು ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದ್ದನ್ನ ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು! ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ ಎಂದಿದ್ದಾರೆ.
ಇನ್ನು ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ, “ಅಂತಿಮವಾಗಿ ರೈತರನ್ನು ಸಂಕಷ್ಟಕ್ಕೆ ದೂಡಿದ ಒಂದು ವರ್ಷದ ನಂತರ, 3 ಕೃಷಿ ಕಾನೂನುಗಳನ್ನು (ತನ್ನ ಆಪ್ತರಾದ ಅಂಬಾನಿ/ಅದಾನಿಗಳಿಗೆ ಕೃಷಿ ಕ್ಷೇತ್ರವನ್ನು ನೀಡಲು ವಿನ್ಯಾಸಗೊಳಿಸಲಾಗಿದ್ದ) ಋಣಾತ್ಮಕ ಚುನಾವಣಾ ಪರಿಣಾಮವನ್ನು ನೋಡಿದ ನಂತರ, ಅವುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಘೋಷಿಸಿದ್ದಾರೆ” ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…