ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ರೈತರು ಸಾವನ್ನಪ್ಪಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಯ ವಿರುದ್ಧವಾಗಿ ರೈತರು ಸರಿಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ರೈತರು ತಿಳಿಸಿದ್ದಾರೆ. ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಪರಿಹಾರವನ್ನು ನೀಡಲು ಸರ್ಕಾರ ಯೋಜಿಸುತ್ತಿದೆಯೇ ಎಂದು ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಚಳಿಗಾಲದ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ನಡೆದ ರೈತರ ಹೋರಾಟದಲ್ಲಿ ಯಾರು ಸಾವನ್ನಪ್ಪಿಲ್ಲ. ರೈತರ ಉಗ್ರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಅಂದರೆ ನವೆಂಬರ್ 29ರಂದು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಂಡಿದೆ. ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸೇರಿದಂತೆ ಅವರ ಪ್ರಮುಖ ಬಾಕಿ ಇರುವ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ ನಂತರ ದೆಹಲಿ ಗಡಿಯಲ್ಲಿ ವರ್ಷವಿಡೀ ನಡೆದ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‍ಕೆಎಂ) ಗುರುವಾರ ಸ್ಥಗಿತಗೊಳಿಸಿದೆ.
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…
ಮಡ್‌ಗಾಂವ್ - ಮಂಗಳೂರು 'ವಂದೇ ಭಾರತ್' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್-ಮಡ್‌ಗಾಂವ್ ನಡುವೆ ಓಡುತ್ತಿದ್ದ…
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…