ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ.
ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆಯನ್ನು ರಾಜ್ಯದಲ್ಲೂ ರೈತರು ಮೊಳಗಿಸಲಿದ್ದಾರೆ.
ಬೆಂಗಳೂರಲ್ಲಿ ಬುಧವಾರ ರೈತರು ಸಿಡಿದೇಳಲಿದ್ದಾರೆ. ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಅನ್ನದಾತರು ಬರಲಿದ್ದಾರೆ. ರಾಜಧಾನಿಗೆ ನಾಳೆಯೇ ಸಾವಿರಾರು ರೈತರು ಬರಲಿದ್ದಾರೆ. ಡಿಸೆಂಬರ್ 9 ರಂದು ಬೆಳಗ್ಗೆ ರೈಲು ಮೂಲಕ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ ಕೊಡಲಿದ್ದು, 9 ರಂದು 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬುಧವಾರ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಬೃಹತ್ ಪ್ರತಿಭಟನೆ ನಡೆಯಲಿದೆ. ನಂತರ ವಿಧಾನಸೌಧಕ್ಕೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ಬಂದ್‍ಗೆ ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ, ರೈತ ಹೋರಾಟಗಾರರು, ಎಪಿಎಂಸಿ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಅವರು ಬೆಂಬಲ ಕೊಡಲಿದ್ದಾರೆ. ಇನ್ನು ಕರವೇ ಪ್ರವೀಣ್ ಶೆಟ್ಟಿ ಬಣ, ಓಲಾ, ಊಬರ್ ಟ್ಯಾಕ್ಸಿ, ಸಾರಿಗೆ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಲಿದೆ. ಆದರೆ ಆಟೋ ಸಂಘಟನೆಗಳು ಮಾತ್ರ ತಟಸ್ಥ ನೀತಿ ತಾಳಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…