ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ : ಪ್ರತಿಪಕ್ಷಗಳ ವಿರುದ್ಧ ಬಿ.ಎಸ್ ಯಡಿಯೂರಪ್ಪ -Vishwanews24
ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ : ಪ್ರತಿಪಕ್ಷಗಳ ವಿರುದ್ಧ ಬಿ.ಎಸ್ ಯಡಿಯೂರಪ್ಪ -Vishwanews24
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಈ ಸಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ @narendramodi ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ. (1/2)
— B.S. Yediyurappa (@BSYBJP) December 8, 2020
ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ತಿಳಿಸಿದ್ದಾರೆ.
