ಉಡುಪಿ

ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ: ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿಕೆ.

ಉಡುಪಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲಾಸಿದ್ಧತೆಗಳು ನಡೆಯುತ್ತಿವೆ. ಇನ್ನು ನಮ್ಮ ಮುಂದಿನ ಗುರಿ ಮಥುರಾದಕೃಷ್ಣ ಹಾಗೂ ಕಾಶಿಯ ವಿಶ್ವನಾಥನ ಬಿಡುಗಡೆಯಾಗಿದೆ ಎಂದು ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯದ ಮಹತ್ವಾಕಾಂಕ್ಷಿ ಯೋಜನೆಯಾದ ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡುಹೊದಿಸುವ ಕಾರ್ಯಕ್ಕೆ ಇಂದು ರಾಜಾಂಗಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು. ಹಿಂದುಗಳ ಬಹುಕಾಲದ ನಿರೀಕ್ಷೆಯಾದ ಅಯೋಧ್ಯೆಯಲ್ಲಿ ರಾಮನಿಗೆ ಭವ್ಯ ಮಂದಿರ ಕಟ್ಟಲು ಎಲ್ಲಾ ವ್ಯವಸ್ಥೆ ಪೂರ್ಣಗೊಳ್ಳುವಕಾಲಘಟ್ಟದಲ್ಲಿ ನಾವಿದ್ದೇವೆ ಎಂದರು.

ರಾಮಜನ್ಮಭೂಮಿಗೆ ಈಗಾಗಲೇ ಮುಕ್ತಿ ಸಿಕ್ಕಿದೆ. ದೇಶದ ಸಾಧು-ಸಂತರು,ಜನಸಾಮಾನ್ಯರು ಅಲ್ಲಿ ಮಂದಿರ ನಿರ್ಮಾಣದ ಸಂಕಲ್ಪತೊಟ್ಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. `ಮೊದಲುರಾಮಮಂದಿರ, ಬಳಿಕ ಚುನಾವಣೆ’ ಎಂದು ಸ್ಪಷ್ಟವಾಗಿತಿಳಿಸಲಾಗಿದೆ ಎಂದು ಗೋ ಮಧುಸೂದನ ತಿಳಿಸಿದರು.

ಮುಂದೆ ನಾವು ಕೃಷ್ಣನ ಜನ್ಮಸ್ಥಾನಕ್ಕೆ ಹಾಗೂಕಾಶಿಗೆ ಜೈ ಕೂಗುತ್ತೇವೆ. ಈ ಮೂರು ದೇವಸ್ಥಾನಗಳು ನಮಗೆ ಬೇಕೇಬೇಕು. ರಾಮ-ಕೃಷ್ಣರು ನಮಗೆ ಕೇವಲರಾಜರಲ್ಲ, ದೇವರು, ಭಗವಂತ, ಸೃಷ್ಟಿಕರ್ತ. ಅವರುನಮ್ಮ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಜೊತೆ ಜೊತೆಗೆಶ್ರೀಕೃಷ್ಣ ಹಾಗೂ ಕಾಶಿ ವಿಶ್ವನಾಥರ ಬಿಡುಗಡೆ ನಮ್ಮಮುಂದಿನ ಗುರಿ. ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago