ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಪುಟ್ಟ ಕಂದಮ್ಮನೊಂದಿಗೆ ವಾಸಿಸುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಶುಕ್ರವಾರ (ಡಿ.5) ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಟ್ರ‍್ಯಾಕ್ ಮೇಲಿದ್ದ ಶವವನ್ನು ತೆರವುಗೊಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ನೇರಳೆ ಮಾರ್ಗದಲ್ಲಿ ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಿ, ಚಲ್ಲಘಟ್ಟದಿಂದ ನಾಯಂಡಹಳ್ಳಿವರೆಗೆ ಮೆಟ್ರೋ ಓಡಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ ಮೆಟ್ರೋ ಎಂದಿನಂತೆ ಸಂಚಾರ ಆರಂಭಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…