Featured

ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ : ಐವರು ಬಾಂಗ್ಲಾಅಕ್ರಮ ವಲಸಿಗರ ಬಂಧನ – vishwanews24

ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ : ಐವರು ಬಾಂಗ್ಲಾಅಕ್ರಮ ವಲಸಿಗರ ಬಂಧನ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ.

20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ (ಉತ್ತರ ಜಿಲ್ಲೆ) ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಅವರು ಸುಮಾರು 3-4 ತಿಂಗಳ ಹಿಂದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೆಹಲಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago