ಕೆಂಪು ಕೋಟೆ ಹಿಂಸಾಚಾರ : ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ : ಹೆಚ್.ಡಿ.ಕುಮಾರಸ್ವಾಮಿ -Vishwanews24
ಕೆಂಪು ಕೋಟೆ ಹಿಂಸಾಚಾರ : ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ : ಹೆಚ್.ಡಿ.ಕುಮಾರಸ್ವಾಮಿ -Vishwanews24
ಬೆಂಗಳೂರು, : “ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ” ಎಂದಿದ್ದಾರೆ.
“ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು” ಎಂದು ತಿಳಿಸಿದ್ದಾರೆ.
ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ.
1/4— H D Kumaraswamy (@hd_kumaraswamy) January 27, 2021
“ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ” ಎಂದಿದ್ದಾರೆ.
“ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು” ಎಂದು ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24
