Featured

ಕೆಂಪು ಕೋಟೆ ಹಿಂಸಾಚಾರ : ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ : ಹೆಚ್‌.ಡಿ.ಕುಮಾರಸ್ವಾಮಿ -Vishwanews24

ಕೆಂಪು ಕೋಟೆ ಹಿಂಸಾಚಾರ : ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ : ಹೆಚ್‌.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು, : “ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು” ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ” ಎಂದಿದ್ದಾರೆ.

“ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು” ಎಂದು ತಿಳಿಸಿದ್ದಾರೆ.

“ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ” ಎಂದಿದ್ದಾರೆ.

“ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು” ಎಂದು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

10 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago