Featured

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ರನ್ನುಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಕುಮಾರಸ್ವಾಮಿ – Vishwanews24

ಬಿಜೆಪಿ ಪಕ್ಷವು ಕೆಂಪೇಗೌಡರ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕೆಂಪೇಗೌಡ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ ಎಂದು ಪ್ರಶ್ನಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ..ಇನ್ನೆರಡು ದಿನ ಗುಡುಗು ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ..ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ – Vishwanews24

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago