Featured

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ – vishwanews24

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಚಾರ ಸುಗಮಗೊಳಿಸಲು ಮತ್ತು ಕರ್ಬ್‌ಸೈಡ್‌ನಲ್ಲಿ ಆಗುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು 2025ರ ಡಿ.8 ರಂದು ಹೊಸ ಪಿಕ್-ಅಪ್ ನಿಯಮಗಳನ್ನು ಜಾರಿಗೊಳಿಸುತ್ತದೆ.

ಪ್ರತಿದಿನ ವಿಮಾನ ನಿಲ್ದಾಣದಲ್ಲಿ ಸುಮಾರು 1.3 ಲಕ್ಷ ಪ್ರಯಾಣಿಕರು ಮತ್ತು 1 ಲಕ್ಷ ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ವಿಶೇಷವಾಗಿ ಟರ್ಮಿನಲ್‌ಗಳ ಮುಂದೆ ಇರುವ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶಗಳಲ್ಲಿ ವಾಹನಗಳು ಹೆಚ್ಚು ಸಮಯ ನಿಂತಿರುವುದರಿಂದ ದಟ್ಟಣೆ ಹೆಚ್ಚುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ಚಾಲಕರಿಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆ, ಬಿಐಎಎಲ್ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ.

ಖಾಸಗಿ ಕಾರುಗಳಿಗೆ (ಬಿಳಿ ಬೋರ್ಡ್) ಹೊಸ ನಿಯಮ
ಟಿ1 ಮತ್ತು ಟಿ2 ಟರ್ಮಿನಲ್‌ಗಳ ಆಗಮನ ವಲಯಕ್ಕೆ ಖಾಸಗಿ ಕಾರುಗಳಿಗೆ ಪ್ರವೇಶ ಉಚಿತ.

ಆದರೆ ಉಚಿತ ನಿಲುಗಡೆ ಸಮಯ 8 ನಿಮಿಷ ಮಾತ್ರ.
8-13 ನಿಮಿಷ ನಿಂತರೆ: 7150
13-18 ನಿಮಿಷ ನಿಂತರೆ: 7300
18 ನಿಮಿಷ ಮೀರಿದರೆ: ವಾಹನವನ್ನು ಪೊಲೀಸ್ ಠಾಣೆಗೆ ಟೋಯಿಂಗ್ ಮಾಡಲಾಗುತ್ತದೆ

ಈ ನಿಯಮಗಳು ಕರ್ಬ್‌ಸೈಡ್‌ನ್ನು ಅನಗತ್ಯವಾಗಿ ಬಳಸುವುದನ್ನು ತಡೆಯಲು ಜಾರಿಗೊಳಿಸಲಾಗಿದೆ.

ಕ್ಯಾಬ್‌ಗಳು ಮತ್ತು ಇತರೆ ವಾಣಿಜ್ಯ ವಾಹನಗಳಿಗೆ ನಿಯಮ
ಹಳದಿ ಬೋರ್ಡ್ ಟ್ಯಾಕ್ಸಿ, ಓಲಾ-ಉಬರ್, ಎಲೆಕ್ಟಿಕ್ ಕ್ಯಾಬ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳು ನಿಗದಿಪಡಿಸಿದ ಪಾರ್ಕಿಂಗ್ ವಲಯಗಳಲ್ಲಿ ಮಾತ್ರ ಕಾಯಬೇಕು.

ಪಾರ್ಕಿಂಗ್‌ನ ಮೊದಲ 10 ನಿಮಿಷ ಉಚಿತ
ಟಿ1 ವಾಹನಗಳು P3 | P4
ಟಿ2 ವಾಹನಗಳು P2 ಪಾರ್ಕಿಂಗ್‌ಗೆ ತೆರಳಬೇಕು

ಕರ್ಬ್‌ಸೈಡ್‌ನಲ್ಲಿ ಅನಧಿಕೃತವಾಗಿ ನಿಲ್ಲುವುದು, ಪಿಕಪ್ ಮಾಡುವುದು ಅಥವಾ ಪಥ ತಡೆದು ನಿಲ್ಲುವುದಕ್ಕೆ ದಂಡ ವಿಧಿಸಲಾಗುತ್ತದೆ.

ಯಾಕೆ ಹೊಸ ನಿಯಮ?

ಇತ್ತೀಚೆಗೆ ಅನಧಿಕೃತ ಕ್ಯಾಬ್‌ಗಳು ಮತ್ತು ಕೆಲವು ವಾಹನಗಳು ದೀರ್ಘಕಾಲ ರಸ್ತೆಬದಿಯಲ್ಲಿ ನಿಲ್ಲುವುದರಿಂದ ದಟ್ಟಣೆ ಹೆಚ್ಚುತ್ತಿದೆ. ಇದರಿಂದ ಪ್ರಯಾಣಿಕರಿಗೆ ವಿಳಂಬ, ಗೊಂದಲ ಮತ್ತು ಸುರಕ್ಷತಾ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸಲು ನಿಯಮಗಳು ಕಡ್ಡಾಯಗೊಳಿಸಲಾಗಿದೆ.

ಬಿಐಎಎಲ್ ಪ್ರತಿಕ್ರಿಯೆ
ಬಿಐಎಎಲ್ ಎಂ.ಡಿ. ಮತ್ತು ಸಿಇಒ ಹರಿ ಮರಾರ್ ಹೇಳುವಂತೆ,
“ಪ್ರಯಾಣಿಕರ ಸಂಖ್ಯೆ ಏರುತ್ತಿರುವುದರಿಂದ ಪಿಕ್-ಅಪ್ ವಲಯಗಳಲ್ಲಿ ಶಿಸ್ತು ಅತ್ಯಂತ ಮುಖ್ಯ. ಹೊಸ ನಿಯಮಗಳು ಸಂಚಾರವನ್ನು ಹೆಚ್ಚು ಸುರಕ್ಷಿತ ಮತ್ತು ವೇಗವಾಗಿ ಮಾಡುತ್ತವೆ,” ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣವು ಸಾಮಾಜಿಕ ಜಾಲತಾಣಗಳಲ್ಲಿ #BeCabWise ಅಭಿಯಾನ ನಡೆಸುತ್ತಿದೆ. ಇದರ ಉದ್ದೇಶ:
ಸರಿಯಾದ ಪಿಕ್-ಅಪ್ ಪಾಯಿಂಟ್ ಬಳಕೆ
ದಟ್ಟಣೆ ರಹಿತ ವಾತಾವರಣ
ಸುರಕ್ಷಿತ ಮತ್ತು ವೇಗವಾದ ಸಂಚಾರ
ಬಿಐಎಎಲ್ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಹೂಡಿಕೆಗಳ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಅನುಭವ ನೀಡಲು ಬದ್ಧವಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago