Featured

ಕೆಆರ್‌ಎಸ್‌ : ಅಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸರ್ಕಾರ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ : ನಳಿನ್‌ ಕುಮಾರ್ ಕಟೀಲ್‌ -Vishwanews24

ಕೆಆರ್‌ಎಸ್‌ : ಯಾವುದೇ ಅಕ್ರಮ ಗಣಿಗಾರಿಕೆಗೆ ಈ ಸರ್ಕಾರ ಅವಕಾಶ ಕೊಡುವುದಿಲ್ಲ : ನಳಿನ್‌ ಕುಮಾರ್ ಕಟೀಲ್‌ -Vishwanews24

ಅಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸರ್ಕಾರ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ..

ಮೈಸೂರು: ‘ಕೆಆರ್‌ಎಸ್‌ ಅಣೆಕಟ್ಟೆ ವಿಚಾರದಲ್ಲಿ ರಾಜಕೀಯ ಮುಖಂಡರು ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಅಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸರ್ಕಾರ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಬುಧವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಕೆಆರ್‌ಎಸ್‌ ಪರಿಶೀಲನೆಗೆ ತಜ್ಞರ ತಂಡ

‘ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೇ ಎಂಬುದನ್ನು ಪರಿಶೀಲಿಸಲು ತಜ್ಞರ ತಂಡವನ್ನು ಕಳುಹಿಸಿಕೊಡಲಾಗುವುದು’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿ, ‘ನಾನು ಮಂಡ್ಯಕ್ಕೆ ಭೇಟಿ ಕೊಡಲಿದ್ದು, ಅಲ್ಲಿನ ಜಿಲ್ಲಾಧಿಕಾರಿ ಜತೆ ಈ ಬಗ್ಗೆ ಚರ್ಚಿಸುತ್ತೇನೆ. ಜಿಲ್ಲಾಧಿಕಾರಿ ನೇತೃತ್ವದ ತಜ್ಞರ ತಂಡವನ್ನು ಕಳುಹಿಸಿ ಇಡೀ ಅಣೆಕಟ್ಟೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸುತ್ತೇನೆ’ ಎಂದು ಹೇಳಿದರು.

‘ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಈಗಾಗಲೇ ತಜ್ಞರು ವರದಿ ಕೊಟ್ಟಿದ್ದಾರೆ. ಅವರ ಮಾತನ್ನು ನಂಬಬೇಕೇ ಹೋರತು, ಬೇರೆಯವರ ಮಾತನ್ನು ನಂಬಲು ಸಾಧ್ಯವಿಲ್ಲ. ನಾನು, ಗಣಿ ಸಚಿವರೂ ಸೇರಿದಂತೆ ಮಂತ್ರಿಗಳು ಈ ವಿಚಾರದಲ್ಲಿ ಹಲವು ಸಲ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ಕೆಆರ್‌ಎಸ್‌ ಬಿರುಕಿನ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಇದರಿಂದ ಕೆಳಭಾಗದಲ್ಲಿ ವಾಸಿಸುತ್ತಿರುವ ಜನರು, ರೈತರಿಗೆ ಆತಂಕ ಉಂಟಾಗಿದೆ’ ಎಂದರು.

‘ಯಾವುದೇ ಅಕ್ರಮ ಗಣಿಗಾರಿಕೆಗೆ ಈ ಸರ್ಕಾರ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಅನುಮತಿ ಪಡೆದಿರುವ ಗಣಿಗಾರಿಕೆ ಮಾತ್ರ ನಡೆಯಲಿದೆ. ಆದರೂ ಕೆಆರ್‌ಎಸ್‌ಗೆ ಏನಾದರೂ ತೊಂದರೆ ಆಗುತ್ತದೆ ಎಂಬ ಸಣ್ಣ ಸುಳಿವು ಸಿಕ್ಕರೂ ಬೇಬಿಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಗಣಿಗಾರಿಕೆ ನಡೆಸುತ್ತಿರುವವರು ಎಷ್ಟೇ ದೊಡ್ಡ ವ್ಯಕ್ತಿಯೇ ಇರಲಿ, ನಾವು ನಿಲ್ಲಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

19 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago