Featured

ಕೆಇಎ ಪರೀಕ್ಷೆಗೆ ಹಿಜಾಬ್ ನಿಷೇಧವಿಲ್ಲ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ – vishwanews24

ಕೆಇಎ ಪರೀಕ್ಷೆಗೆ ಹಿಜಾಬ್ ನಿಷೇಧವಿಲ್ಲ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು : ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಆದೇಶವೊಂದನ್ನು ಹೊರಡಿಸಿತ್ತು. ಅದರಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲೆ ನಿಷೇಧ ಹೇರಲಾಗಿದೆ. ಅದು ಹಿಜಾಬ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ಕೆಇಎಯ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕಾರಣಿಗಳಿಂದ ಟೀಕೆಗೆ ಗುರಿಯಾಗಿತ್ತು.

ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್‌, ”ಹಿಜಾಬ್‌ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಹೇಳಿದ್ದಾರೆ.

”ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳು ಇರಲಿವೆ. ಹಿಜಾಬ್ ಧರಿಸಿರುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ವರದಿಯಾಗಿರುವ ವಂಚನೆ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಹಾಗಾಗಿ ಸಂಪೂರ್ಣ ತಪಾಸಣೆ ಇರಲಿದೆ” ಎಂದು ತಿಳಿಸಿದ್ದಾರೆ.

”ಈ ನಿಯಮಗಳು ಹೊಸದೇನಲ್ಲ. ಅವು ಮೊದಲೇ ಅಸ್ತಿತ್ವದಲ್ಲಿವೆ. ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧ ಹಿಜಾಬ್‌ಗೆ ಅನ್ವಯಿಸುವುದಿಲ್ಲ” ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಈ ಡ್ರೆಸ್ ಕೋಡ್ ಆದೇಶದಲ್ಲಿ ಎಲ್ಲಾ ರೀತಿಯ ತಲೆ ಹೊದಿಕೆಯನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪವಿತ್ತು. ಹಾಗಾಗಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಕ್ಕುಗಳ ಬಗ್ಗೆ ಚರ್ಚೆ ಹುಟ್ಟುಹಾಕಿತ್ತು. ಇದೀಗ ಆ ಬಗ್ಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ನ.18 ಮತ್ತು 19 ರಂದು ರಾಜ್ಯಾದ್ಯಂತ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಮುಂಚಿತವಾಗಿ ಈ ಪ್ರಕಟನೆ ಬಂದಿದೆ. ಬ್ಲೂಟೂತ್ ಸಾಧನಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಯಲು ಪರೀಕ್ಷಾ ಹಾಲ್‌ನಲ್ಲಿ ”ತಲೆ, ಬಾಯಿ ಅಥವಾ ಕಿವಿಗಳನ್ನು ಮುಚ್ಚುವ ಯಾವುದೇ ಉಡುಪು ಅಥವಾ ಕ್ಯಾಪ್ ಧರಿಸುವುದನ್ನು ನಿಷೇಧಿಸಲಾಗುವುದು” ಎಂದು ಕೆಇಎ ಆದೇಶ ಹೊರಡಿಸಿತ್ತು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago