Featured

ಕೆಎಂಎಫ್​ನಿಂದ ಹಾಲು ಉತ್ಪಾಕರ ಬ್ಯಾಂಕ್ ತೆರೆಯಲು ಸಿಎಂ ಬೊಮ್ಮಾಯಿ ಸಲಹೆ -Vishwanews24

ಕೆಎಂಎಫ್​ನಿಂದ ಹಾಲು ಉತ್ಪಾಕರ ಬ್ಯಾಂಕ್ ತೆರೆಯಲು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ -Vishwanews24

ಬೆಂಗಳೂರು: ರೈತ ಕುಟುಂಬ ಕೃಷಿ ಹೊರತಾಗಿ ಹೈನುಗಾರಿಕೆಯಲ್ಲಿ (Dairy Farm) ಕಾರ್ಯ ಮಾಡುತ್ತಿದ್ದಾರೆ. ಕೆಎಂಎಫ್ (KMF) ರೈತರ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಹಕಾರಿ ಸಂಸ್ಥೆಗಳು ಶ್ರೀಮಂತಗೊಳ್ಳಬೇಕು. ಅದರಲ್ಲಿ ಕೆಲವರು ಮಾತ್ರ ಶ್ರೀಮಂತಗೊಳ್ಳುವುದು ನಮಗೆ ಬೇಕಾಗಿಲ್ಲ. ಸಹಕಾರ ಕ್ಷೇತ್ರದ ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲರಾಗಬೇಕಿದೆ. ಹಾಲು ಉತ್ಪಾಕರ ಬ್ಯಾಂಕ್  ತೆರೆಯಿರಿ. ಇದು ನನ್ನ ಹಾಗೂ ಸಚಿವ ಸತೀಶ್ ಮನದಾಸೆಯಿದೆ. ಈಗಾಗಲೇ ಕೆಎಂಎಫ್ ಗೆ ಎಲ್ಲ ಅರ್ಹತೆಯಿದೆ. ಈ ಕುರಿತು ಮುಂದೆ ಕಾರ್ಯೋನ್ಮುಖರಾಗಿ. ಆಗ ಸರ್ಕಾರಕ್ಕೆ ಪದೇ ಪದೇ ಅನುದಾನ ಕೇಳುವುದು ತಪ್ಪುತ್ತದೆ. ಈ ರೀತಿ ಮಾಡಿದರೆ 100 ಕೋಟಿ ಕ್ಯಾಪಿಟಲ್ ಸರ್ಕಾರ ನೀಡಲಾಗುತ್ತದೆ ಎಂದು ಕೆಎಂಎಎಫ್​ಗೆ ಸಿಎಂ ಬಸವರಾಜ ಬೊಮ್ಮಾಯಿ  ಅವರು ಸಲಹೆ ನೀಡಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ವತಿಯಿಂದ ಆಯೋಜಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ತೆರೆಯಲಾಗುವುದು. ಆರಂಭಕ್ಕೆ ಬೇಕಾದ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗುತ್ತದೆ. ನಿರ್ವಹಣೆಯನ್ನು ಪಶುಸಂಗೋಪನೆ ಇಲಾಖೆ ನೋಡಿಕೊಳ್ಳಬೇಕು.No profit no loss ರೀತಿ ಕಾರ್ಯ ನಿರ್ವಹಿಸಬೇಕು. ಗೋಶಾಲೆ ಪುಣ್ಯದ ಕೆಲಸ ಅದನ್ನು ನಾವೆಲ್ಲ ಸೇರಿ ಮಾಡಬೇಕು. ಯಾವ ಜಿಲ್ಲೆಯಲ್ಲಿ ನೀರಾವರಿ, ಹಸಿರು ಇದೆ ಅಲ್ಲಿ ಗೋವುಗಳನ್ನು ಹೆಚ್ಚು ರೈತರಿಗೆ ನೀಡಲಾಗುವುದು. ಕೇಂದ್ರ ಹಾಗು ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ಮುಂದೆ ಆರಂಭಿಸಲಾಗುವುದು ಎಂದರು.

ಇದನ್ನೂ ಓದಿ : ಖಾಸಗಿ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಇಲ್ಲ : ಸಚಿವ ಅಶ್ವತ್ಥನಾರಾಯಣ -Vishwanews24

ಹಾಲಿನ ದರ ಹೆಚ್ಚಳ ಮಾಡುವ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಈ ಕುರಿತು ನಾನು ಯಾವುದೇ ಆಶ್ವಾಸನೆ ಕೊಡುವುದಿಲ್ಲ. ಕೊಡಲು ಬರುವುದಿಲ್ಲ. ನಾಯಕರಾದ ಯಡಿಯೂರಪ್ಪ ಪ್ರೋತ್ಸಾಹ ಧನ ನೀಡಿದ್ದರು. ಕೋವಿಡ್ ಸಂದರ್ಭದಲ್ಲಿ 1250 ಕೋಟಿ ಸಹಾಯ ಮಾಡಲಾಗಿದೆ. ಇದಕ್ಕೆ ಬಿಎಸ್ ವೈ ಗೆ ಅಭಾರಿಯಾಗಿದ್ದೇನೆ. ಬಿಎಸ್ ವೈ ಅವರ ಯೋಜನೆ ಮುಂದುವರೆಸಲಾಗುವುದು. ಕೆಎಂಎಫ್ ಗೆ ಈ ವರ್ಷ 50 ಕೋಟಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದರು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

5 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

5 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

5 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

5 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago