ಬೆಂಗಳೂರು :ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು, ತೀವ್ರ ಲಾಬಿ ನಡೆಸಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದರು. ಹಿಂದೆ ಅವರು ಎರಡು ಬಾರಿ ಅಧ್ಯಕ್ಷರಾಗಿದ್ದರು.
16 ಕೆಎಂಎಫ್ ನಿರ್ದೇಶಕರಲ್ಲಿ, 13 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆಯಾಗಿ ಬಿಟ್ಟರು ಎಂದೇ ಹೇಳಲಾಗುತ್ತಿದೆ. ಅಲ್ಲದೇ ಅಧಿಕೃತ ಘೋಷಣೆಯೊಂದೆ ಬೇಕಿ ಇದೆ.
ಈ ನಡುವೆ ಚುನಾವಣಾ ಕಣದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರ ಗೆಲುವಿಗೆ ಮತ್ತಷ್ಟು ಹಾದಿಯನ್ನು ಸುಗಮ ಮಾಡಿಕೊಟ್ಟ ಪರಿಣಾಮ, ಇದೀಗ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
‘ಕೆಎಂಎಫ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕೆಎಂಎಫ್ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಾಲು ಉತ್ಪಾದಕ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಲಾಭ ದೊರೆಯಲೆಂದು ಆಶಿಸುತ್ತೇನೆ‘ ಎಂದು ಟ್ವೀಟಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…