ಬಿ ಸಿ ರೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಏ.26 ರ ಶುಕ್ರವಾರ 3 ಗಂಟೆ ವೇಳೆಗೆ ನಡೆದಿದೆ.
ಪುತ್ತೂರಿನಿಂದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರಿನ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಾದ ಸರೋಜಿನಿ ಮತ್ತು ಅನುಷಾ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ಹಾಗೂ ರುಕ್ಮಿಣಿ ಎಂಬವರು ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಮಂಗಳೂರಿನ ಜೆಪ್ಪು ನಿವಾಸಿಗಳಾಗಿದ್ದು, ಇವರು ಶಂಬೂರಿನಲ್ಲಿರುವ ತಮ್ಮ ಸಂಬಂಧಿಕರ ಗೃಹಪ್ರವೇಶಕ್ಕೆಂದು ತೆರಳುತ್ತಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…