ದೆಹಲಿ: ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿಕೇಟ್ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್‌ನೊಂದಿಗೆ ಯೂನಿಯನ್ ಬ್ಯಾಂಕ್ ಮತ್ತು ಆಂಧ್ರಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹಾಗೆಯೇ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೊಂದಿಗೆ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್‌ನೊಂದಿಗೆ ಇಂಡಿಯನ್ ಬ್ಯಾಂಕ್, ವಿಜಯಾ ಬ್ಯಾಂಕ್‌ನೊಂದಿಗೆ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಮುಖವಾಗಿ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ , ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ವಿಲೀನ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಅನ್ನು ವಿಲೀನಗೊಳಿಸಲಾಗುವ ಬಗ್ಗೆ ಘೋಷಿಸಿದ್ದಾರೆ.
ವಿಲೀನಗೊಂಡ ನಂತರ ಕೆನರಾ ಬ್ಯಾಂಕ್-ಸಿಂಡಿಕೇಟ್ ಬ್ಯಾಂಕ್ ಸಾರ್ವಜನಿಕ ವಲಯದ ನಾಲ್ಕನೇ ಅತಿದೊಡ್ಡ ಬ್ಯಾಂಕ್ ಎನಿಸಲಿದೆ. ದೇಶದಲ್ಲಿ ಸದ್ಯ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಸಂಖ್ಯೆ 27ರಿಂದ 12ಕ್ಕೆ ಇಳಿದಿದೆ. ವಿಲೀನದಿಂದ ಕಾರ್ಯಕ್ಷಮತೆ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.
ವಸೂಲಾಗದ ಸಾಲ ಪ್ರಮಾಣ 7.90 ಲಕ್ಷ ಕೋಟಿ ರೂ.ಗೆ ಇಳಿದಿದ್ದು, ಬ್ಯಾಂಕ್‌ಗಳ ಆರ್ಥಿಕ ಸ್ಥಿತಿ ಸುಧಾರಿಸಿದೆ. ಹೊಸ ಪೀಳಿಗೆಯ ತಂತ್ರಜ್ಞಾನ ಆಧರಿತ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…