ಉಡುಪಿ: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಡಿ ಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ನವೆಂಬರ್ 29 ರಂದು ಆಗಮಿಸಲಿದ್ದು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗಳಿಗೆ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಶನಿವಾರ ಉಡುಪಿ ಪುಸ್ ಕೂಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನವೆಂಬರ್ 28ರಂದು ಸಂಜೆ 8 ಗಂಟೆಗೆ ಉತ್ತರಕನ್ನಡ ಜಿಲ್ಲಾ ಪ್ರವಾಸ ಮುಗಿಸಿ ಉಡುಪಿ ಜಿಲ್ಲಾ ಗಡಿಯಾದ ಶಿರೂರಿಗೆ ಆಗಮಿಸಲಿದ್ದು ಪಕ್ಷದ ವತಿಯಿಂದ ಸ್ವಾಗತಿಸಲಾಗುವುದು. ಬಳಿಕ ಅವರು ಕಮಲ ಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನವಂಬರ್ 29 ರ ಬೆಳಿಗ್ಗೆ ಕೊಲ್ಲೂರು ಮೂಕಾಂಬಿಕ ದೇವಸ್ತಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಉಡುಪಿಗೆ ಆಗಮಿಸಲಿದ್ದು, ಉಡುಪಿ ಬಾಸೆಲ್ ಮಿಷನರಿಸ್ ಆಡಿಟೋರಿಯಂ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಡಾ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು ಆರ್ ಸಭಾಪತಿ, ಕಿಸಾನ್ ಘಟಕದ ಸಚಿನ್ ಮಿಗಾ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದರು. ಕಾರ್ಯಕರ್ತರ ಸಮಾವೇಶಕ್ಕೆ ಪ್ರತಿ ಬ್ಯಾಕ್ ನಿಂದ ಆಯ್ದ ಕಾರ್ಯಕರ್ತರು ಭಾಗವಹಿಸಲಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಪ್ರಶಾಂತ್ ಜತ್ತನ್ನ ಕೀರ್ತಿ ಶೆಟ್ಟಿ, ಅಣ್ಣಯ್ಯ ಶೇರಿಗಾರ್ ಹಾಗೂ ಇತರರು ಉಪಸ್ತಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…