ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲಾ ಭೇಟಿಯನ್ನು ಹಮ್ಮಿಕೊಂಡಿದ್ದು ನವಂಬರ್ 29ರಂದು ಬೆಳಿಗ್ಗೆ 8.00 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಬೆಳಿಗ್ಗೆ 10.45ಕ್ಕೆ ಉಡುಪಿಗೆ ಆಗಮನದೊಂದಿಗೆ 11.00 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿ ಇರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವರು.
ತದನಂತರ ಮದ್ಯಾಹ್ನ 2.00 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…