Featured

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24

ಕಾಫಿ ಶಾಪ್’ಗಳಲ್ಲಿ ವಾಶ್ ರೂಮ್ ಬಳಸುವ ಹೆಣ್ಣು ಮಕ್ಕಳೇ ಹುಷಾರ್ ..!

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ..

ಬೆಂಗಳೂರು:  ನಗರದ ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆಯಾಗಿದ್ದು, ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಆರೋಪಿಯ ಬಂಧನವಾಗಿದೆ.

ಬಂಧಿತ ಆರೋಪಿಯನ್ನು ಭದ್ರಾವತಿಯ ಮನೋಜ್ ಎಂದು ಗುರ್ತಿಸಲಾಗಿದೆ. ಈತ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್‌ಲೆಟ್‌ನಲ್ಲಿ ಕಳೆದ ಆರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ.

ಯುವತಿಯೊಬ್ಬಳು ಥರ್ಡ್ ವೇವ್ ಕಾಫಿ ಔಟ್‌ಲೆಟ್‌ಗೆ ಹೋಗಿದ್ದು, ಕಾಫಿ ಆರ್ಡರ್ ಮಾಡಿದ್ದಾಳೆ. ಬಳಿಕ ಅಲ್ಲಿನ ವಾಶ್ ರೂಮ್ ಬಳಸಲು ತೆರಳಿದಾಗ ಡಸ್ಟ್‌ಬಿನ್‌ನಲ್ಲಿ ಹಿಡೆನ್ ಕ್ಯಾಮೆರಾ ಇರುವುದು ಪತ್ತೆಯಾಗಿದೆ.ಮೊಬೈಲ್ ನಲ್ಲಿ ಕ್ಯಾಮೆರಾ ಆನ್ ಮಾಡಿ ರೆಕಾರ್ಡಿಂಗ್ ಗೆ ಇಡಲಾಗಿದ್ದು, ಫೋನ್ ಅಥವಾ ಯಾವುದೇ ಸಂದೇಶಗಳು ಬರುವುದನ್ನು ತಡೆಯಲು ಫ್ಲೈಟ್ ಮೋಡ್’ಗೆ ಹಾಕಲಾಗಿದೆ. ಡಸ್ಟ್ ಬಿನ್ ನ್ನು ಟಾಯ್ಲೆಟ್ ಸೀಟಿಗೆ ಎದುರಾಗಿ ಇರಿಸಲಾಗಿದೆ. ಇದರ ವಿಡಿಯೋವನ್ನು ಯುವತಿ ತನ್ನ ಫೋನ್ ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಫೋನ್ ಕೆಫೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳಲ್ಲಿ ಒಬ್ಬರಿಗೆ ಸೇರಿದ್ದು ಎಂಬುದು ತಿಳಿದುಬಂದಿದೆ. ಬಳಿಕ ಆತನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಈ ವಿಚಾರ ಎಲ್ಲೆಡೆ ಹರಡುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಆರೋಪಿಯನ್ನು ಬಧನಕ್ಕೊಳಪಡಿಸಿದ್ದಾರೆ. ಈ ಸಂಬಂಧ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago