ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು – vishwanews24

Featured, ರಾಜ್ಯ ನ್ಯೂಸ್

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ  ಜಿಲ್ಲೆಯ ಯಳಂದೂರು  ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ನಡೆದಿದೆ.

ಗುಂಬಳ್ಳಿ ಗ್ರಾಮದ ಅಭಯಗೌಡ (13), ಕೃಷ್ಷಾಪುರದ ವೃಷಬೇಂದ್ರ (14) ಮೃತ ದುರ್ದೈವಿಗಳು.

ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ; ಕ್ಯಾಂಡಲ್ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಣೆ – vishwanews24

ವೃಷಬೇಂದ್ರ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತೋರ್ವ ಬಾಲಕ ಅಭಯ್‌ಗೌಡನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply