ಕೆಲಸದ ವೇಳೆ ಯಾರೂ ಮೊಬೈಲ್ ಬಳಸಬಾರದು : ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ಉಮಾನಾಥ ಕೋಟ್ಯಾನ್ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ತೋರುತ್ತಿದ್ದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಮುಲ್ಕಿ -ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿನ್ನೆ ಸೋಮವಾರ ಏಕಾಏಕಿ ನಾಡಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದರು. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸವಲತ್ತುಗಳಿಗಾಗಿ ಅವರು ನಿಮ್ಮಲ್ಲಿ ಗೋಗರೆಯಬೇಕೇ? ಅಧಿಕಾರಿಗಳು ಯಾವಾಗಲೂ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಇನ್ನು ಮೇಲೆ ಕೆಲಸದ ವೇಳೆ ಯಾರಾದರೂ ಮೊಬೈಲ್ ಬಳಸುತ್ತಿರುವುದು ಕಂಡಲ್ಲಿ ಅವರನ್ನು ನೋಡಿಕೊಳ್ಳುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.