ಮಂಗಳೂರು : ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ತೋರುತ್ತಿದ್ದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಮುಲ್ಕಿ -ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿನ್ನೆ ಸೋಮವಾರ ಏಕಾಏಕಿ ನಾಡಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದರು. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸವಲತ್ತುಗಳಿಗಾಗಿ ಅವರು ನಿಮ್ಮಲ್ಲಿ ಗೋಗರೆಯಬೇಕೇ? ಅಧಿಕಾರಿಗಳು ಯಾವಾಗಲೂ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಇನ್ನು ಮೇಲೆ ಕೆಲಸದ ವೇಳೆ ಯಾರಾದರೂ ಮೊಬೈಲ್ ಬಳಸುತ್ತಿರುವುದು ಕಂಡಲ್ಲಿ ಅವರನ್ನು ನೋಡಿಕೊಳ್ಳುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…