Featured

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಪಿಸುವಿಕೆ ತೀವ್ರಗೊಂಡಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ದಾಖಲೆಯ 90,632 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತವು ಬ್ರೆಜಿಲ್‌ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್‌ ಸ್ಪಾಟ್‌ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಜಿಲ್‌ನಲ್ಲಿ ಭಾನುವಾರ ಕೋವಿಡ್ ದೃಢಪಟ್ಟವರ ಸಂಖ್ಯೆ 41.23 ಲಕ್ಷ ದಾಟಿದರೆ, ಭಾರತದ ಸೋಂಕಿತರ ಒಟ್ಟಾರೆ ಸಂಖ್ಯೆ 41.60 ಲಕ್ಷ ಮೀರಿದೆ. ಅಲ್ಲದೆ, 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. 64.35 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.

ಶನಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 1,065 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ, ಈವರೆಗೆ 32 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ.77.32ಕ್ಕೇರಿಕೆಯಾಗಿದೆ. ಅಲ್ಲದೆ, ಒಂದೇ ದಿನದಲ್ಲಿ ದಾಖಲೆಯ 70 ಸಾವಿರಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2020ರ ಜ.30ರಂದು ದೇಶದಲ್ಲಿ ಮೊದಲ ಕೇಸು ದಾಖಲಾಗಿತ್ತು. ಆಗ ವಿಶ್ವದಲ್ಲಿಯೇ ಅತೀ ಹೆಚ್ಚು ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತದ ಸ್ಥಾನ 50ಕ್ಕಿಂತ ಮೇಲಕ್ಕಿತ್ತು. ಆದರೆ, ನಂತರದಲ್ಲಿ ವಿದೇಶದಿಂದ ಬಂದವರ ಮೂಲಕ ಮತ್ತು ಸ್ಥಳೀಯವಾಗಿ ಹಬ್ಬಿದ ಪ್ರಕರಣಗಳು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಲು ಕಾರಣವಾಯಿತು. ಜೊತೆಗೆ ಪ್ರಸಕ್ತ ನಿತ್ಯವೂ 11ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂತು ಪತ್ತೆ ನಡೆಸುತ್ತಿರುವುದು ಕೂಡ ದಾಖಲೆ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಲು ಕಾರಣವಾಗಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago